Ad

ಪರಶುರಾಮ ಥೀಮ್ ಪಾರ್ಕ್ ಹಗರಣ : ತನಿಖೆ ಚುರುಕುಗೊಳಿಸಿದ ಕಾರ್ಕಳ ಪೊಲೀಸರು

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಬೆಂಗಳೂರಿನ ಗೋಡೌನ್‌ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಬೆಂಗಳೂರಿನ ಗೋಡೌನ್‌ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡವು ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸ್ಥಳ ಮಹಜರು ನಡೆಸಿದೆ. ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ಪ್ರತಿಮೆಗೆ ಬೇಕಾದ ವಸ್ತುಗಳು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಪರಿಶೀಲನೆ ನಡೆಸಲಾಗಿದೆ.
ಪರಶುರಾಮ ಮೂರ್ತಿ ನಿರ್ಮಾಣದ ಬಗ್ಗೆ ವಿವಾದ ಕೇಳಿ ಬಂದ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಾರ್ಕಳ ಟೌನ್ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಕಾರ್ಕಳ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಈ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶಿಸಿದ್ದರು.

Ad
Ad
Nk Channel Final 21 09 2023