Bengaluru 24°C
Ad

ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಬಿಜೆಪಿ ಮುಖಂಡನ ಪೋಟೊ

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಬಹಳ ದೊಡ್ಡ ಎಡವಟ್ಟು ಕಂಡುಬಂದಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಅವರ ಭಾವಚಿತ್ರವನ್ನು ಮುದ್ರಿಸಿದೆ.

ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಬಹಳ ದೊಡ್ಡ ಎಡವಟ್ಟು ಕಂಡುಬಂದಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಅವರ ಭಾವಚಿತ್ರವನ್ನು ಮುದ್ರಿಸಿದೆ.

ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ.ಕೆ ಮಂಜುನಾಥ್ ಕುಮಾರ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಕಂಡು ಬಂದಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆರು ಪುಟಗಳ ಪ್ರಚಾರ ಪತ್ರದ ಐದನೇ ಪುಟದಲ್ಲಿ ಎಲ್ಲಾ ನಾಯಕರ ಫೋಟೋಗಳ ಮಧ್ಯೆ ಬಿಜೆಪಿ ಉದಯಕುಮಾರ್ ಶೆಟ್ಟಿ ಅವರ ಫೋಟೋ ಕೂಡ ರಾರಾಜಿಸುತ್ತಿದೆ.

ಇದು ಗೂಗಲ್ ನಲ್ಲಿ ಸರ್ಚ್ ಮಾಡಿದ ಪರಿಣಾಮ ಆಗಿರುವ ದೋಷ ಎಂದು ತಿಳಿದು ಬಂದಿದೆ. ಈಗಾಗಲೇ ಸಾವಿರಾರು ಪ್ರಚಾರ ಪತ್ರಗಳನ್ನು ಮುದ್ರಿಸಿ ಹಂಚಲಾಗಿದೆ.

Ad
Ad
Nk Channel Final 21 09 2023
Ad