Bengaluru 17°C

ಪಡುಬಿದ್ರಿ: ಪೊಲೀಸರಿಂದ 16.62 ಲಕ್ಷ ರೂ.ಮೌಲ್ಯದ ಗಾಂಜಾ ನಾಶ

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 27 ಕೆಜಿ 970ಗ್ರಾಂ 120 ಮಿಲಿಗ್ರಾಂ ತೂಕದ ಅಂದಾಜು 16,62,804 ರೂ. ಮೌಲ್ಯದ ಗಾಂಜಾವನ್ನು ನಾಶಪಡಿಸಲಾಯಿತು.

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 27 ಕೆಜಿ 970ಗ್ರಾಂ 120 ಮಿಲಿಗ್ರಾಂ ತೂಕದ ಅಂದಾಜು 16,62,804 ರೂ. ಮೌಲ್ಯದ ಗಾಂಜಾವನ್ನು ನಾಶಪಡಿಸಲಾಯಿತು.


ಪಡುಬಿದ್ರಿ ಠಾಣಾ ವ್ಯಾಪ್ತಿಯ ಆಯುಷ್ ಎನ್‌ವಿರೋಟೆಕ್ ಪ್ರೈ. ಎಂಬಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷ ಡಾ. ಅರುಣ್ ಕೆ., ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


Nk Channel Final 21 09 2023