ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಬಳಿ ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ದಾಳಿಂಬೆ ಹಣ್ಣುಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದವು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸ್ಥಳಕ್ಕೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಸ್ಥಳೀಯರು ತೆರಳಿ ರಸ್ತೆಯಲ್ಲಿ ಬಿದ್ದಿದ್ದ ಹಣ್ಣುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.