ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಿತೇಶ್ (20) ಮತ್ತು ಹಿತೇಶ್ (19) ಬಂಧಿತರು. ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.
— News Karnataka (@Newskarnataka) February 5, 2026

