Ad

ತೈಲ ಬೆಲೆ ಏರಿಕೆ ವಿರೋಧಿಸಿ ಕಾಪು ಮಂಡಲ ಬಿಜೆಪಿಯಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಪ್ರತಿಭಟನೆ ನಡೆಸಲಾಯಿತು.

ಉಡುಪಿ: ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಪ್ರತಿಭಟನೆ ನಡೆಸಲಾಯಿತು.

Ad
300x250 2

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ದ್ವಿಚಕ್ರ ವಾಹನದ ಅಣಕು ಶವಯಾತ್ರೆ ನಡೆಸಿ ಹಾಗೂ ಖಾಲಿ ಚೊಂಬು ಪ್ರದರ್ಶಿಸಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

P (1)

ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು,

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾ ಮತ್ತು ಕಾಪು ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad