ಉಡುಪಿ: ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆಗಳು ಸೂಕ್ತ ನಿರ್ವಹಣೆ ಇಲ್ಲದೆ ಟೋಲ್ ಪೀಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ad
ಸರ್ವಿಸ್ ರಸ್ತೆ ಇಲ್ಲ, ಹೆದ್ದಾರಿಯಲ್ಲಿ ಹೊಂಡ ಬಿದ್ದಿದೆ, ಶಾಲಾ ಕಾಲೇಜು ವಾಹನಗಳಿಗೂ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ. ಹೆದ್ದಾರಿ ಅಭಿವೃದ್ಧಿಯಿಂದ ಪ್ರಾಣಹಾನಿಯಾಗುತ್ತಿದ್ದು, ಯಾವುದೇ ಮನವಿಗಳಿಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಿವಿಗೊಡುತ್ತಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
Ad
ಹೆದ್ದಾರಿಯಲ್ಲಿ ಯಾವುದೇ ದಾರಿದೀಪ ವ್ಯವಸ್ಥೆ ಇಲ್ಲ. ಚರಂಡಿಗಳ ಹೂಳೆತ್ತದೆ ಮಳೆಗಾಲದಲ್ಲಿ ಸಂಪೂರ್ಣ ರಸ್ತೆ ಜಲಾಮಯವಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು. ಜಿಲ್ಲಾಡಳಿತ ,ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಪಂದಿಸಲಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
Ad
Ad