ಉಡುಪಿ : ಶಾಲೆಯಲ್ಲಿ ಟಿಸಿ ನೀಡದೆ ಅವಮಾನಿಸಿದರೆಂದು ಮನನೊಂದ ಎಸ್‌ಎಸ್‌ಎಲ್‌ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಿತಿನ್ ಎಸ್‌ಎಸ್‌ಎಲ್‌ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

