Bengaluru 23°C
Ad

ಟಿಸಿ ನೀಡಲು ನಿರಾಕರಣೆ : ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯಲ್ಲಿ ಟಿಸಿ ನೀಡದೆ ಅವಮಾನಿಸಿದರೆಂದು ಮನನೊಂದ ಎಸ್‌ಎಸ್‌ಎಲ್‌ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉಡುಪಿ : ಶಾಲೆಯಲ್ಲಿ ಟಿಸಿ ನೀಡದೆ ಅವಮಾನಿಸಿದರೆಂದು ಮನನೊಂದ ಎಸ್‌ಎಸ್‌ಎಲ್‌ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad