ಉಡುಪಿ: ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಲುಕಿಕೊಂಡಿತ್ತು. ಇದರ ಪರಿಣಾಮ ಕಳೆದ ಎರಡು ದಿನಗಳಿಂದ ಅತ್ತಿಂದಿತ್ತ ಅಲೆಯುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡ ತೀರ್ಥ ನಡಿಕೆರೆ ರತ್ನಕರ ಶೆಟ್ಟಿ ಅವರ ಜಮೀನಿನಲ್ಲಿ ಈ ಘಟನೆ ನಡೆದಿತ್ತು.
ಕಾಪುವಿನ ಸ್ಥಳೀಯ ಉರಗ ರಕ್ಷಕ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಡವನ್ನು ಹಿಡಿದು ಅದರ ಮುಖಕ್ಕೆ ಅಂಟಿಕೊಂಡ ತಂಪು ಪಾನೀಯದ ಟಿನ್‌ಅನ್ನು ಸುರಕ್ಷಿತವಾಗಿ ಬಿಡಿಸಿದರು. ಬಳಿಕ ಉಡವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ಪ್ರಾಣಿ ಪಕ್ಷಿಗಳಿಗೂ ನಮ್ಮಂತೆ ಬದುಕುವ ಹಕ್ಕಿದೆ. ಆದ್ದರಿಂದ ತಂಪು ಪಾನೀಯ ಕುಡಿದು ಎಲ್ಲೆಂದರಲ್ಲಿ ಬಿಸಾಡುವ, ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವ ಜನರು ಈ ಘಟನೆಯಿಂದ ಎಚ್ಚೆತ್ತುಕೊಳ್ಳಬೇಕಿದೆ.
Ad