ಉಡುಪಿ: ಆರ್ ಎಸ್ ಎಸ್ ನಿಷೇಧ ವಿಚಾರವಾಗಿ ಉಡುಪಿಯಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಮಾನ್ಯ ಖರ್ಗೆಯವರು , ಅವರ ಅಭಿಪ್ರಾಯವನ್ನು ಸರಕಾರಕ್ಕೆ ಹೇಳಿದ್ದಾರೆ. ಅವರ ಅಭಿಪ್ರಾಯ ತಿಳಿಸುವ ಹಕ್ಕು ಅವರಿಗೆ ಖಂಡಿತವಾಗಿ ಇದೆ. ಮುಖ್ಯಮಂತ್ರಿಗಳು ಎಲ್ಲರ ಜೊತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆರ್ ಎಸ್ ಎಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆಯನ್ನು ಮಾಡುತ್ತಿದೆ.  ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ ಎಂದರು.

ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು. ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎಂದೆನಿಸಬಹುದು. ತಪ್ಪುಗಳಿದ್ದರೆ ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನಿಸಿ. ಆರ್ ಎಸ್ ಎಸ್ ನೂರು ವರ್ಷಗಳಿಂದ ಮಾಡುತ್ತಿರುವ ದೇಶ ಕಾರ್ಯವನ್ನು ಗಮನಿಸಿ. ದೇಶಕ್ಕೆ ಆಗಿರುವ ಲಾಭವನ್ನು ಗಮನಿಸಬೇಕು ಎಂದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಆರ್ ಎಸ್ ಎಸ್ ಮಾಡಿರುವ ದೇಶ ಸೇವೆ ಯಾರು ಅಲ್ಲಗಳೆಯಲು ಸಾಧ್ಯವಿಲ್ಲ. ಮುಂದೆಯೂ ಆರ್ ಎಸ್ ಎಸ್ ಸೇವ ಕಾರ್ಯ ಮುಂದುವರಿಯುತ್ತೆ, ಮುಖ್ಯಮಂತ್ರಿಗಳು ಎಲ್ಲರ ಜೊತೆ ಚರ್ಚಿಸಿ ಯೋಗ್ಯವಾದ ನಿರ್ಧಾರ ಕೈಗೊಳ್ಳಲಿ. ಪ್ರಿಯಾಂಕ ಖರ್ಗೆಯವರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಮುಖ್ಯಮಂತ್ರಿಗಳು ಯೋಗ್ಯ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದರು.

ಯಾವುದೇ ವ್ಯವಸ್ಥೆಯಲ್ಲಿ ಲೋಪದೋಷಗಳು ಇದ್ದರೆ ಸರಿಪಡಿಸಲು ಗಮನ ಹರಿಸಬೇಕು. ಸಮಾಜಕ್ಕೆ ಆಗುವ ಲಾಭವನ್ನು ಗಮನಿಸಬೇಕು. ನೂರು ವರ್ಷ ಪೂರೈಸಿರುವ ಆರ್ ಎಸ್ ಎಸ್ ಬ್ಯಾನ್ ಮಾಡುವುದು ಸರಿಯಲ್ಲ, ಸರಕಾರ ಎಲ್ಲ ವಿಷಯದಲ್ಲೂ ಲಾಭ ನಷ್ಟವನ್ನು ಗಮನಿಸಬೇಕು.  ಮೂಗು ಸೋರುತ್ತಿದೆ ಎಂದು ಅದನ್ನು ಕಿತ್ತೆಸೆಯುತ್ತಾರಾ, ಎಲ್ಲವೂ ಸುಖಾಂತವಾಗುತ್ತೆ ಎಂದರು.

ನವೆಂಬರ್ 25ರಂದು ಅಯೋಧ್ಯೆಯಲ್ಲಿ ತ್ರಿವರ್ಣ ಧ್ವಜಾರೋಹಣ ನಡೆಯಲಿದೆ. ದೇವಾಲಯದ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಸಮಾರೋಪ ಕಾರ್ಯಕ್ರಮದಲ್ಲಿ ಮಂದಿರವನ್ನು ರಾಮ ದೇವರಿಗೆ ಅರ್ಪಿಸಲಾಗುತ್ತದೆ. ಧ್ವಜಾರೋಹಣದ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುತ್ತಾರೆ. ಪ್ರಧಾನ ಮಂತ್ರಿಗಳು ಧ್ವಜಾ ರೋಹಣ ಮಾಡುತ್ತಾರೆ. ಪೂರ್ವಭಾವಿ ಪೂಜಾ ಕಾರ್ಯಗಳು ನಡೆಯಲಿವೆ.