Bengaluru 24°C
Ad

ರಾಜ್ಯ ಗೃಹ ಸಚಿವರನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಉಡುಪಿ: ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್,

ಅನಿತಾ ಮರವಂತೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ ಪಂದುಬೆಟ್ಟು, ಉಡುಪಿ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷೆ ವೀಣಾ ನಾಯ್ಕ್, ಕಾರ್ಯದರ್ಶಿ ಮಮತಾ ಶೆಟ್ಟಿ, ಮಹಿಳಾ ಮೋರ್ಚಾ ಉಡುಪಿ ನಗರ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ಉಪಾಧ್ಯಕ್ಷೆ ಸುಧಾ ಪೈ, ಪ್ರಧಾನ ಕಾರ್ಯದರ್ಶಿ ಸರೋಜಾ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರಾದ ದೀಪಾ ಪೈ,

ವಿದ್ಯಾ, ಉಡುಪಿ ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಕೋಶಾಧಿಕಾರಿ ಶೈಲಾ, ಕಾಪು ಅಧ್ಯಕ್ಷೆ ನೀತಾ ಗುರುರಾಜ್, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಮಟ್ಟು ಗೋಪಾಲಕೃಷ್ಣ ರಾವ್ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad