ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರನ್ನು ಶ್ರೀಕೃಷ್ಣಮಠಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.

ಸಂಸ್ಕೃತ ಕಾಲೇಜಿನಿಂದ ಮೆರವಣಿಗೆಯ ಮೂಲಕ ಶ್ರೀಪಾದರನ್ನು ಸ್ವಾಗತಿಸಿ ನಂತರ ಕನಕನ ಕಿಂಡಿಯಲ್ಲಿ ದೇವರ ದರ್ಶನ ಮಾಡಿದರು. ಕೃಷ್ಣ ಮಠದ ಮುಂಭಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉತ್ತರಾಧಿ ಮಠದ ಶ್ರೀ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರನ್ನು ಸ್ವಾಗತಿಸಿದರು ಹಾಗೂ ದೇವರ ದರ್ಶನ ಮಾಡಿಸಿದರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.ಹಾಗೂ ಶೀರೂರು ಮಠದ ಶಿಷ್ಯವರ್ಗದವರು ಹಾಗೂ ಉತ್ತರಾಧಿ ಮಠದ ಶಿಷ್ಯವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.