Ad

ಉಡುಪಿ: ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ ದೈಹಿಕ ಶಿಕ್ಷಕ

Udupi

ಉಡುಪಿ: ಉಡುಪಿಯ ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿ ಶೌಚಾಲಯ ಸ್ವಚ್ಛ ಮಾಡುವ ದೃಶ್ಯ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿದ್ಯಾರ್ಥಿ ಪೊರಕೆ ಶೌಚಾಯಲ ಹಿಡಿದು ಸ್ವಚ್ಛ ಮಾಡುತ್ತಿದ್ದು, ದೈಹಿಕ ಶಿಕ್ಷಕ ನೀರು ಹಾಕುತ್ತಿದ್ದಾರೆ.

Ad
300x250 2

ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಲಾಗಿತ್ತು. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯಗುರುಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಇದಾದ ನಂತರ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಯೊಂದರಲ್ಲೂ ಸಹ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿತ್ತು. ಈ ಸಂಬಂಧ ತಪ್ಪಿಸ್ಥರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಪ್ರಕರಣ ಸಹ ದಾಖಲಾಗಿತ್ತು.

Ad
Ad
Nk Channel Final 21 09 2023
Ad