ಉಡುಪಿ: ಕಾರೊಂದು ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಡಿಕ್ಕಿಯಾದ ಘಟನೆ ಸಂತೆಕಟ್ಟೆಯ‌ ಓವರ್ ಬ್ರಿಡ್ಜ್ ಬಳಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆ ತೆರಳುತ್ತಿದ್ದ ಬೆಲೆನೊ ಕಾರು ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಉಡುಪಿಯಿಂದ ಕುಂದಾಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಲೆನೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಕಾರಿಗೂ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಖಾಸಗಿ ‌ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

View this post on Instagram

A post shared by News Karnataka (@newskarnataka)