Bengaluru 23°C
Ad

ಮಣಿಪಾಲ: ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad

ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್‌(22) ಕಿಶನ್‌(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.

Ad

ಾ

ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್‌ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Ad
Ad
Ad
Nk Channel Final 21 09 2023