Bengaluru 21°C
Ad

ನ.23ರ ನಂತರ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ : ವಿ. ಸುನಿಲ್ ಕುಮಾ‌ರ್ ಭವಿಷ್ಯ

ಇವತ್ತು ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿರುಸಿನ ಮತದಾನ ನಡೆದಿದೆ. ಮೂರೂ ಕಡೆ ನಮಗೆ ಉತ್ತಮ ವಾತಾವರಣ ಇದೆ.

ಉಡುಪಿ: ಇವತ್ತು ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿರುಸಿನ ಮತದಾನ ನಡೆದಿದೆ. ಮೂರೂ ಕಡೆ ನಮಗೆ ಉತ್ತಮ ವಾತಾವರಣ ಇದೆ. ಸಂಡೂರು ಉಪಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸಿದ್ದೇನೆ. ಮೂರೂ ಕಡೆ ನಿಶ್ಚಿತವಾಗಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾ‌ರ್ ಭವಿಷ್ಯ ನುಡಿದಿದ್ದಾರೆ.

Ad

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಆಂತರಿಕ ಬೇಗುದಿ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ನ. 23ರ ನಂತರ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ. ಬೆಳಗಾವಿ ಅಧಿವೇಶನದ ಹೊತ್ತಿಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಹೇಳಿದ್ದಾರೆ.

Ad

 

Ad
Ad
Nk Channel Final 21 09 2023