ಉಡುಪಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಜೆಡಿಎಸ್ ಕಾರ್ಯಕರ್ತರು ಚನ್ನಪಟ್ಟಣ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.
Ad
ಜೆ.ಡಿ.ಎಸ್ ಜಿಲ್ಲಾ ಕಾರ್ಯಾದಕ್ಷ ವಾಸುದೇವ ರಾವ್ ನೇತೃತ್ವದಲ್ಲಿ ಪೂಜೆ ನಡೆಯಿತು. ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಶತಾಯಗತಾಯ ಗೆಲ್ಲಬೇಕು ಎಂದು ಸಾಮೂಹಿಕವಾಗಿ ಕಾರ್ಯಕರ್ತರು ಪ್ರಾರ್ಥಿಸಿದರು.ಈ ಸಂದರ್ಭ ಜೆ.ಡಿ.ಎಸ್ ಮುಖಂಡರುಗಳಾದ ಶ್ರೀಕಾಂತ್ ಅಡಿಗ ಕೊಲ್ಲೂರು, ಸಂದೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
Ad
Ad