Bengaluru 25°C
Ad

ಶಿರ್ವ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತ್ಯು

Died

ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ.

ಇವರು ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad