Bengaluru 23°C
Ad

ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆಗಳ ಸಮಸ್ಯೆ ಇದೆ. ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆಗಾದರೂ ಸರಕಾರಿ ಬಸ್ ಗಳ ಸೇವೆಯನ್ನು ನಮ್ಮ ತಾಲೂಕಿಗೆ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ತಾಲೂಕು ಕಚೇರಿಯ ಮುಂಭಾಗದಲ್ಲಿ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸರಕಾರಿ ಬಸ್ ಸೇವೆ ನೀಡಿ ಸಹಕರಿಸುವಂತೆ ಎಂದು ಮನವಿ ಮಾಡಿದರು.

Ad
Ad
Nk Channel Final 21 09 2023
Ad