Bengaluru 22°C
Ad

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಾಯಕನ ಬಂಧನ ಅತ್ಯಂತ ಖಂಡನೀಯ: ಸುಗುಣೇಂದ್ರತೀರ್ಥ ಸ್ವಾಮೀಜಿ

ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕನ ಬಂಧನ ಅತ್ಯಂತ ಖಂಡನೀಯ.

ಉಡುಪಿ: ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕನ ಬಂಧನ ಅತ್ಯಂತ ಖಂಡನೀಯ. ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಸಮರ್ಥನಿಯವಲ್ಲ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.

Ad

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸ್ವಾಮೀಜಿ, ಬಾಂಗ್ಲಾ ಜಾತ್ಯಾತೀತ ರಾಷ್ಟ್ರವಾಗಿ ಹಿಂದೂ ಧರ್ಮದ ಮೇಲೆ ಈ ರೀತಿಯ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ. ಇಸ್ಕಾನ್ ಧಾರ್ಮಿಕ ನಾಯಕನನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಈ ಕುರಿತಂತೆ ಭಾರತ ಸರಕಾರವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Ad
Ad
Ad
Nk Channel Final 21 09 2023