Bengaluru 17°C

ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿವೆ, ಸನಾತನ ಬೋರ್ಡ್ ಜಾರಿಗೆ ಬರಬೇಕು: ಪೇಜಾವರ ಶ್ರೀ

ಇಂದು ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿದೆ. ಜೀರ್ಣೋದ್ಧಾರ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ.

ಉಡುಪಿ: ಇಂದು ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿದೆ. ಜೀರ್ಣೋದ್ಧಾರ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಭಕ್ತರ ಕಾಣಿಕೆ ಸಧ್ವಿನಿಯೋಗ ಆಗುತ್ತಿಲ್ಲ. ಅಂತಹ ಅನೇಕ ಆಕ್ಷೇಪಗಳಿವೆ. ಆದುದರಿಂದ ಸನಾತನ ಬೋರ್ಡ್ ಜಾರಿಗೆ ಬರಬೇಕು ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.


ಪೆರ್ಣಂಕಿಲ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಗುಲದ ಸಂಪತ್ತಿಂದ ಊರಿಗೆ ಶಿಕ್ಷಣ ಆಗಬೇಕು ಮತ್ತು ವೈದ್ಯಕೀಯಕ್ಕೆ ಹಣ ಬಳಕೆಯಾಗಬೇಕು. ಇದೆಲ್ಲ ಸನಾತನ ಬೋರ್ಡ್‌ನಿಂದ ಮಾತ್ರ ಸಾಧ್ಯ ಎಂದರು.


ಅಖಂಡ ಹಿಂದೂ ರಾಷ್ಟ್ರ ಕಲ್ಪನೆಯ ಸಂವಿಧಾನ ಸಿದ್ಧ ಪಡಿಸಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಕುಂಭಮೇಳದಲ್ಲಿನ ಸಂತ ಸಮಾವೇಶದಲ್ಲಿ ನಾವು ಪರಿಪೂರ್ಣವಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.


Nk Channel Final 21 09 2023