ಉಡುಪಿ: ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಗೂಡ್ಸ್ ಟೆಂಪೋಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪರ್ಕಳ ಬಿ.ಎಂ. ಸ್ಕೂಲ್ ಬಳಿ ಸಂಭವಿಸಿದೆ.

ಟೆಂಪೋ ಚಾಲಕ ಮಣಿಪಾಲದ ಕಡೆಗೆ ಯೂಟರ್ನ್ ತೆಗೆದುಕೊಳ್ಳುತ್ತಿದ್ದು, ಈ ವೇಳೆ ಹಿರಿಯಡಕ ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್ ಸವಾರ ಟೆಂಪೋಗೆ ಡಿಕ್ಕಿ ಹೊಡೆದಿದ್ದಾನೆ.

ಇದರಿಂದ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಟೆಂಪೋದ ಮುಂಭಾಗಕ್ಕೂ ಹಾನಿ ಉಂಟಾಗಿದೆ.