ಉಡುಪಿ: ಕಾಶ್ಮೀರದಲ್ಲಿ ಹಿಂದುಗಳ ಮೇಲೆ ಉಗ್ರ ದಾಳಿ ವಿಚಾರವಾಗಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ದುರ್ಘಟನೆಯಿಂದ ಬಹಳ ಆಘಾತವಾಗಿದೆ ಎಂದರು.

ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕಾಶ್ಮೀರ ಫೈಲ್ಸ್ ಚಿತ್ರದಂತೆ ವ್ಯತಿರಿಕ್ತ ಇಲ್ಲದೆ ಈ ಘಟನೆ ನಡೆದಿದೆ. ಈ ಘಟನೆ ಬಹಳ ಆಘಾತಕಾರಿ ಸರಕಾರ ಬಲವಾದ ಕ್ರಮ ಕೈಗೊಳ್ಳಬೇಕು.

ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದರು.