Bengaluru 21°C
Ad

ಉಡುಪಿ: ಡಿವೈಡ‌ರ್ ಕಲ್ಲುಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ಕಾರೊಂದು ಡಿವೈಡ‌ರ್ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ತೀವ್ರ ಗಾಯಗೊಂಡ ಘಟನೆ ಉಡುಪಿಯ ಇಂದ್ರಾಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಉಡುಪಿ: ಕಾರೊಂದು ಡಿವೈಡ‌ರ್ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ತೀವ್ರ ಗಾಯಗೊಂಡ ಘಟನೆ ಉಡುಪಿಯ ಇಂದ್ರಾಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ ವಿಭಜಕವಾಗಿ ಇರಿಸಲಾಗಿದ್ದ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರು ಪಲ್ಟಿಯಾಗುವ ಸಂದರ್ಭ ದೊಡ್ಡ ಕಲ್ಲೊಂದು ಬೈಕಿನತ್ತ ಹಾರಿದ್ದು, ಅದೃಷ್ಟವಶಾತ್ ಬೈಕ್‌ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿ ರಸ್ತೆ ಮಧ್ಯೆ ವಿಭಜಕವಾಗಿ ಕಲ್ಲುಗಳನ್ನು ಇರಿಸಲಾಗಿದೆ. ಇತ್ತೀಚೆಗೆ ಆ ಕಲ್ಲುಗಳನ್ನು ಎಲ್ಲೆಂದರಲ್ಲಿ ಇರಿಸಲಾಗಿತ್ತು. ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಟ್ರಾಫಿಕ್ ಪೊಲೀಸ್ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಲಕ್ಷಕ್ಕೆ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

Ad
Ad
Nk Channel Final 21 09 2023
Ad