ಉಡುಪಿ : ಮುಡಾ ಪ್ರಕರಣದಲ್ಲಿ ಈಗಾಗಲೇ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗಿರುವು ಹಿನ್ನೆಲೆಯಲ್ಲಿ ಮೊದಲು ಅವರು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಸೂಕ್ತ ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಡಾ ಮಾತ್ರವಲ್ಲ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲೂ ಬಹುಕೋಟಿ ಹಗರಣ ನಡೆದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಿಎಂ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆ ಎದುರಿಸುವುದು ಒಳ್ಳೆಯದ್ದು. ತನಿಖೆಯಲ್ಲಿ ಏನು ವರದಿ ಬರುತ್ತದೆ ಎಂಬುವುದು ನೋಡಿಕೊಂಡು ಮತ್ತೆ ಅವರು ಸಿಎಂ ಆಗಲು ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.
Ad