Bengaluru 20°C
Ad

ಹೆಜಮಾಡಿ: ಕುಡಿದ ಮತ್ತಿನಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ

ಕುಡಿದ ಮತ್ತಿನಲ್ಲಿ ಅತೀ‌ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ.

ಉಡುಪಿ: ಕುಡಿದ ಮತ್ತಿನಲ್ಲಿ ಅತೀ‌ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ.

Ad

ಕೇರಳ ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಮೊದಲು ಪಾಂಗಾಳ ಸಮೀಪ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಲ್ಲಿ ಕಾರು ನಿಲ್ಲಿಸದೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ.

Ad

ಚ (2)

ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಕಂಬವೊಂದಕ್ಕೆ ಗುದ್ದಿದ್ದಾರೆ. ಬಳಿಕ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ಕಾರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದ್ದು, ನಾಲ್ವರು ಕಂಠಪೂರ್ತಿ ಕುಡಿದಿದ್ದಾರೆ ಎನ್ನಲಾಗಿದೆ.

Ad
Ad
Ad
Nk Channel Final 21 09 2023