Bengaluru 27°C

ಉಡುಪಿ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ

ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಕಾಣಿಕೆ ಡಬ್ಬಿಯಲ್ಲಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ದೇವಸ್ಥಾನದಲ್ಲಿ‌ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿ: ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಕಾಣಿಕೆ ಡಬ್ಬಿಯಲ್ಲಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ದೇವಸ್ಥಾನದಲ್ಲಿ‌ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ದೇವಸ್ಥಾನ ಜೀರ್ಣೋದ್ದಾರಗೊಂಡಿತ್ತು. ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಸುಮಾರು 40 ಸಾವಿರಕ್ಕೂ ಅಧಿಕ ಹಣವನ್ನು ಎಗರಿಸಿದ್ದಾನೆ. ಚಪ್ಪಲಿ ಹಾಕಿಕೊಂಡೆ‌ ಕೈ ಮುಗಿದು ಬಳಿಕ ಕಳ್ಳತನ ಕೃತ್ಯ ನಡೆಸಿದ್ದು, ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳನ‌ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Nk Channel Final 21 09 2023