ಉಡುಪಿ: ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಅಂಗಡಿಯಲ್ಲಿ ಮೊಬೈಲ್ ಕಳ್ಳತನವಾಗಿರುವುದು ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು ಬಂದಾಗ ತಿಳಿದುಬಂದಿದೆ. ಬಳಿಕ ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮೊಬೈಲ್ ಕಳ್ಳತನದ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಕಂಡುಬಂದಿದೆ.
ನಗರದ ಜನನಿಬಿಡ ಪ್ರದೇಶದಲ್ಲೇ ಈ ಘಟನೆ ನಡೆದಿರುವುದು ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

