ಉಡುಪಿ: ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಉಡುಪಿಯ ತನ್ನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾಸನದಲ್ಲಿ ಕಾಂಗ್ರೆಸ್ ಭಿನ್ನಮತೀಯರ ಸಮಾವೇಶ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದರು.
ಸಚಿವ ಸಂಪುಟ ವಿಸ್ತರಣೆ ಚರ್ಚೆ ವಿಚಾರದ ಕುರಿತು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇಲ್ಲ. ಚರ್ಚೆ ಮಾಧ್ಯಮಗಳಲ್ಲಿ ಮಾತ್ರ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ ಸ್ಪಷ್ಟಪಡಿಸಬೇಕು. ವಿರೋಧ ಪಕ್ಷದ ಒಳಗಿನ ಗಲಾಟೆ ನಮಗೆ ಅನುಕೂಲವಾಗುತ್ತದೆ ಎಂದು ಹೇಳಿದರು.