Ad

ನಾಳೆ ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

Ad
300x250 2

ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ  ರಜೆ ಘೋಷಿಸಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಆದೇಶ ನೀಡಿದ್ದಾರೆ.

ಭಾರೀ ಗಾಳಿ ಮಳೆಗೆ ಮೂರು ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Ad
Ad
Nk Channel Final 21 09 2023
Ad