ಉಡುಪಿ: ನರಕ ಚತುರ್ದಶಿಯ ಮುನ್ನಾದಿನದ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಜಲಪೂರಣ ಕಾರ್ಯಕ್ರಮ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಾತ್ರಿ ಶ್ರೀಕೃಷ್ಣ ಪೂಜೆಯ ಬಳಿಕ ಜಲಪೂರಣ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ವಿದ್ವಾಂಸರು, ದಿವಾನರು, ಪಾರುಪತ್ಯೆಗಾರರು ಹಾಗೂ ಮಠದ ಸಿಬ್ಬಂದಿ ಉಪಸ್ಥಿತರಿದ್ದರು.