ಉಡುಪಿ: ಕಾಪು ಲೈಟ್ಹೌಸ್ ಬೀಚ್ನಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಸಮುದ್ರಪಾಲಾದವರನ್ನು ಶಿವಮೊಗ್ಗ ಜಿಲ್ಲೆಯ ಮಾವಿನಕೊಪ್ಪದ ಹೊಸನಗರ ನಿವಾಸಿ ಸಮೀರ್ (20) ಹಾಗೂ ದಾವಣಗೆರೆ ಜಿಲ್ಲೆಯ ಅಹಮ್ಮದಿ ನಗರದ ನಿವಾಸಿ ಮಲ್ಲಿಕ್ ರಿಹಾನ್ (15) ಎಂದು ಗುರುತಿಸಲಾಗಿದೆ.
ಐದು ಮಂದಿ ಕಾಪು ಲೈಟ್ಹೌಸ್ ಬೀಚ್ಗೆ ತೆರಳಿ ಸಮುದ್ರದಲ್ಲಿ ಈಜುತ್ತಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಸಮುದ್ರಪಾಲಾಗಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

