Bengaluru 23°C
Ad

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿವೆ ಬೃಹತ್ ಮರಗಳು

ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು, ಮಳೆಗಾಲದಲ್ಲಿ ಅಪಾಯಕ್ಕೆ ಸೂಚನೆ ನೀಡುತ್ತಿದೆ.

ಉಡುಪಿ: ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು, ಮಳೆಗಾಲದಲ್ಲಿ ಅಪಾಯಕ್ಕೆ ಸೂಚನೆ ನೀಡುತ್ತಿದೆ.

Ad
300x250 2

ಈ ಭಾಗದಲ್ಲಿ ಹಲವು ಅಪಾಯದ ಮರಗಳು ಬೀಳುವ ಸಾಧ್ಯತೆಗಳಿವೆ. ಕಳೆದ ಮಳೆಗಾಲದಲ್ಲಿ ಈ ಭಾಗದಲ್ಲಿ ಸಾಕಷ್ಟು ಮರಗಳು ಉರುಳಿಬಿದ್ದಿವೆ. ಯಾವುದೇ ಅನಾಹುತ ಆಗದಿದ್ದರೂ, ಈಗ ಈ ಮರಗಳನ್ನು ತಡಿಯಬೇಕು. ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮ (6)

ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾರದ ಶನಿವಾರ ಸಂತೆ ನಡೆಯುತ್ತದೆ. ಈ ಸಂತೆಗೆ ನೂರಾರು ಜನರು ಖರೀದಿಗೆ ಆಗಮಿಸುತ್ತಾರೆ. ಮರ ಕಡಿಯುವ ಕುರಿತು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವನೆ ಆಗಿದ್ದು, ಪಂಚಾಯತ್ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮ ಪಂಚಾಯತ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿ ಕೈಕಟ್ಟಿ ಕುಳಿತುಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಅದೇ ರೀತಿಯಲ್ಲಿ ಈ ಭಾಗದಲ್ಲಿ ಬೃಹತ್ ಮರಗಳು ರಸ್ತೆಗೆ ಬಾಗಿದ್ದು, ಅನಾಹುತಕ್ಕೆ ಆಹ್ವಾನ ಕೊಡುತ್ತಿದೆ. ಕೂಡಲೇ ಸಂಬಂಧಪಟ್ಟವರು ಈ ಮರದ ಕೊಂಬೆ ಅಥವಾ ಮರವನ್ನು ಕಡಿಯಬೇಕೆಂದು ಒತ್ತಾಯಿಸಿದ್ದಾರೆ.

Ad
Ad
Nk Channel Final 21 09 2023
Ad