Bengaluru 20°C

ಶಂಕರನಾರಾಯಣ: ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ್ಯು

ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಬೆಳ್ವೆ ಸಮೀಪದ ಗುಮ್ಮಲ ಎಂಬಲ್ಲಿ  ಸಂಭವಿಸಿದೆ.

ಉಡುಪಿ: ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಬೆಳ್ವೆ ಸಮೀಪದ ಗುಮ್ಮಲ ಎಂಬಲ್ಲಿ  ಸಂಭವಿಸಿದೆ.


ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ (13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಶ್ರೀಶ ಹೆಬ್ರಿಯ ಎಸ್‌ಆರ್‌ಎಸ್‌ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ ಮನೆ ಸಮೀಪದ ಡ್ಯಾಂಗೆ ಈಜಲು ಹೋಗಿದ್ದರು.


ಈ ವೇಳೆ ಶ್ರೀಶ ಹಾಗೂ ಜಯಂತ್ ಅಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಶಂಕರ ನಾರಾಯಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Nk Channel Final 21 09 2023