Bengaluru 26°C

ಉಡುಪಿ ಜಿಲ್ಲಾ ಕೃಷಿಕ ಸಂಘದ ರೈತ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಫೆ.8 ರಂದು ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯುವ ಉಡುಪಿ ಜಿಲ್ಲಾ ಕೃಷಿಕ ಸಂಘದ ರೈತ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಉಡುಪಿ: ಫೆ.8 ರಂದು ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯುವ ಉಡುಪಿ ಜಿಲ್ಲಾ ಕೃಷಿಕ ಸಂಘದ ರೈತ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.


ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ್ರಗತಿಪರ ಕೃಷಿಕ, ಉದ್ಯಮಿ ರಾಜಾರಾಂ ಭಟ್ ಅವರು, ಮನುಷ್ಯನಲ್ಲಿ ಎಷ್ಟೇ ದುಡ್ಡಿದ್ದರೂ ಅದನ್ನು ತಿನ್ನಲಾಗುವುದಿಲ್ಲ. ಬದುಕಿಗೆ ಆಹಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ರೈತರ ಪರಿಶ್ರಮವನ್ನು ಅಲ್ಲಗಳೆಯಲಾಗದು ಎಂದರು.


ಕಟಪಾಡಿಯ ವಿಜಯಾ ಸೋಲಾರ್ಸ್ ಮಾಲೀಕ ಸತ್ಯೇಂದ್ರ ಪೈ, ಶ್ರೀ ನಿತ್ಯಾನಂದಸ್ವಾಮಿ ಮಂದಿರದ ಆಡಳಿತ ಟ್ರಸ್ಟಿ ಕೆ. ದಿವಾಕರ ಶೆಟ್ಟಿ ತೋಟದಮನೆ ಕೊಡವೂರು ಸಮಾವೇಶದ ಯಶಸ್ಸಿಗೆ ಶುಭ ಹಾರೈಸಿದರು.


ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮಾ ಬಂಟಕಲ್ಲು, ಉಪಾಧ್ಯಕ್ಷ ದಿನೇಶ್ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು. ಶ್ರೀನಿವಾಸ ಬಲ್ಲಾಳ್ ಸ್ವಾಗತಿಸಿದರು. ಕುದಿ ಶ್ರೀನಿವಾಸ ಭಟ್ ಪ್ರಾಸ್ತಾವಿಕ ಮಾತನಾಡಿದರು. ರವೀಂದ್ರ ಗುಜ್ಜರಬೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Nk Channel Final 21 09 2023