ಉಡುಪಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸ್ವರೂಪಾ ಟಿ ಕೆ ನೂತನ ಡಿಸಿಯಾಗಿ ನೇಮಕಗೊಂಡಿದ್ದಾರೆ.
ಡಾ. ವಿದ್ಯಾಕುಮಾರಿ 2023 ಜುಲೈನಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿಯೋಜಿತ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ 2012 ರ ತಂಡದ ಐಎಎಸ್ ಅಧಿಕಾರಿಯಾಗಿದ್ದಾರೆ. ಸರಕಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

