ಉಡುಪಿ: ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು. ಆದರೆ ಎರಡು ವರ್ಷಗಳ ಹಿಂದೆ ನಡೆದಿದ್ದ “ಹಿಜಾಬ್ ವಿವಾದ” ಕಾರಣಕ್ಕಾಗಿ ಅವರ ಆಯ್ಕೆಗೆ ಸರಕಾರ ತಡೆ ನೀಡಿದೆ.
ಎರಡು ವರ್ಷಗಳ ಹಿಂದೆ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನಲ್ಲಿ ತಡೆದು ನಿಲ್ಲಿಸಿದ್ದ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರನ್ನು 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯಮಟ್ಟದ ‘ಉತ್ತಮ ಪ್ರಾಂಶುಪಾಲ ಪ್ರಶಸ್ತಿ’ಗೆ ಕಾಂಗ್ರೆಸ್ ಸರ್ಕಾರ ಆಯ್ಕೆ ಮಾಡಿತ್ತು. ಇದಕ್ಕೆ ಎಡಪಂಥೀಯರು ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಯಿತು. ವಿವಾದ ಭುಗಿಲೇಳುತ್ತಿದ್ದಂತೆ ಸರ್ಕಾರವು ಪ್ರಶಸ್ತಿಗೆ ತಡೆ ನೀಡಿದೆ.

