Ad

ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ನಿಧನ

Udupi (1)

ಉಡುಪಿ: ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಇಂದು (ಜೂನ್‌ 18) ಬೆಳಗ್ಗೆ ಹೃದಯಾಘಾತದಿಂದ ಅಂಬಲಪಾಡಿಯ ಸ್ವಗೃಹದಲ್ಲಿ ನಿಧನರಾದರು.

Ad
300x250 2

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Ad
Ad
Nk Channel Final 21 09 2023
Ad