Bengaluru 22°C
Ad

ಉಡುಪಿ ಪ್ರವಾಸಿ ಮಂದಿರ ವಿದ್ಯುತ್ ಬಿಲ್ ಬಾಕಿ: ವಿದ್ಯುತ್ ಕಡಿತಗೊಳಿಸಿದ ಮೆಸ್ಕಾಂ

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್‌ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್‌ ಸುವರ್ಣ ಕಿಡಿಕಾರಿದ್ದಾರೆ.

ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್‌ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯತ್ಪಾಲ್‌ ಸುವರ್ಣ ಕಿಡಿಕಾರಿದ್ದಾರೆ.

ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್‌ ಬಿಲ್ ಬಾಕಿ ಇದ್ದು, ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು ಪ್ರವಾಸಿಗರಿದ್ದು, ಕತ್ತಲೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಶಾಸಕ ಯತ್ಪಾಲ್‌ ಸುವರ್ಣ, ಪ್ರವಾಸಿ ಮಂದಿರದ ಸಿಬ್ಬಂದಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ಪಾಲ್‌ ಸುವರ್ಣ ಬರೆದುಕೊಂಡಿದ್ದು, ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್‌ ಕಡಿತಗೊಳಿಸಲು ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲವೆ? ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad
Ad
Nk Channel Final 21 09 2023