ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಬರುತ್ತಿದ್ದಾರೆ. ರವಿ ಪೂಜಾರಿಗೆ ಸ್ವಗ್ರಾಮಕ್ಕೆ ತೆರಳಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ.

ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ಉಡುಪಿಗೆ ಆಗಮಿಸಲಿದ್ದಾರೆ. ಮಲ್ಪೆಯಲ್ಲಿ ನಡೆಯಲಿರುವ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಅಂತ್ಯಕ್ರಿಯೆ ವಿಧಿವಿಧಾನ ಮುಗಿದ ಬಳಿಕ ಮತ್ತೆ ಬೆಂಗಳೂರಿಗೆ ಕರೆದೊಯ್ಯಲು ನ್ಯಾಯಾಲಯ ಸೂಚನೆ ನೀಡಿದೆ.

ರವಿ ಪೂಜಾರಿಯನ್ನು ಕರೆತರಲು ಬೆಂಗಳೂರಿನ ಸಿಟಿ ಆರ್ಮ್ಡ್ ರಿಸರ್ವ್ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಜೈಲು ಇಲಾಖೆಯಿಂದ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಕಲ್ಲಿಸಲಾಗಿದೆ. ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸರಿಂದ ಸ್ಥಳೀಯ ಭದ್ರತೆ ನೀಡಲಿದ್ದಾರೆ. ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆಯ ಸಂಪೂರ್ಣ ವೆಚ್ಚವನ್ನು ರವಿ ಪೂಜಾರಿಯೇ ಭರಿಸಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.