ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹಾಗೂ ಜಿಲ್ಲಾ ಬಿಜೆಪಿ ವಕ್ತಾರ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

