Bengaluru 29°C
Ad

ಲಂಚ ಸ್ವೀಕರಿಸುತ್ತಿದ್ದಾಗ ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad
Ad
Nk Channel Final 21 09 2023
Ad