ಉಡುಪಿ: ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ “ನವರಸ ದೀಕ್ಷಾ ವೈಭವಂ” ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ,
216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ವಿಶ್ವದಾಖಲೆ ಬರೆದ ವಿದುಷಿ ದೀಕ್ಷಾ ವಿ ಅವರನ್ನು ಸನ್ಮಾನ ಮಾಡಿದರು.

