ಉಡುಪಿ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಕರಕಲಾದ ಘಟನೆ ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಗುರುವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ್ವಿಚಕ್ರ ವಾಹನದ ವಾರಸುದಾರರು ಪತ್ತೆಯಾಗಿಲ್ಲ. ಮಲ್ಪೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

