ಉಡುಪಿ: ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಮಾಡ್ಗಾವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣವೇ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್ ಪಿ ಎಫ್ ಸಿಬ್ಬಂದಿ ಅರ್ಪಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲ್ವೆ ಮಹಿಳಾ ಪ್ಯಾಸೆಂಜರ್ ಅಪಾಯದಿಂದ ಪಾರಾಗಿದ್ದಾರೆ. ಆರ್ ಪಿ ಎಫ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ಯವಾಗಿದೆ.

