ಉಡುಪಿ: ಮಹಿಳಾ ಭಜನಾ ಮಂಡಳಿ ಸದಸ್ಯರು ಶಿವ ದೇವರ ಹಾಡಿಗೆ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಶಿವ ಪಾರ್ವತಿಯ ವೇಷಭೂಷಣ ಧರಿಸಿ ಭಕ್ತಿಗೀತೆಗೆ ಮಹಿಳಾಮಣಿಗಳು ಹೆಜ್ಜೆ ಹಾಕಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಕುಂಜಿಬೆಟ್ಟುವಿನ ಐವೈಸಿ ಸಭಾಂಗಣದಲ್ಲಿ “ಎಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ ಕಾರ್ಯಕ್ರಮ ಆಯೋಜಿಸಿತ್ತು.

ಶಾಲಾ ಮಕ್ಕಳು ಪ್ರದರ್ಶಿಸಿದ ಕಿರುನಾಟಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತು. ಶಾಲಾ ಮಕ್ಕಳು ನೃತ್ಯದ ಮೂಲಕ ಮನರಂಜನೆ ನೀಡಿದರು.