Bengaluru 17°C

ಪಡುಬಿದ್ರಿ: ಯಕ್ಷಗಾನ ಕಲಾವಿದನಿಗೆ ಮನೆಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ

ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಉಡುಪಿ: ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.


ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್‌ನಿಂದ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು.


ಆದರೆ ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿದರು.


ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಕೋಣಗಳಿಗೆ ಹೊಡೆಯುವ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದುದಲ್ಲದೆ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೆಪರ್‌ಗೆ ಬಲಾತ್ಕಾರವಾಗಿ ಸಹಿ ಪಡೆದುಕೊಂಡಿದ್ದಾರೆ ಎಂದು ದೂರಲಾಗಿದೆ.


ಹಲ್ಲೆಗೊಳಗಾದ ನಿತಿನ್ ಅದೇ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನದಲ್ಲಿ ಪಾಲ್ಗೊಂಡಿದ್ದು, ಬೆಳಿಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023