ಉಡುಪಿ: ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ಪರಿಹಾರ ಆದ್ರೂ ನೀಡಿ ಎಂದು ಎನ್ಕೌಂಟರ್ ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಸುಗುಣ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೊ ಪರಿಹಾರ ನಮಗೆ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ.

ಎನ್ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೊ ಪರಿಹರ ನಮಗೆ ಕೊಟ್ರೆ ಸಾಕು. ನಾವು ಕಷ್ಟದಲ್ಲಿದ್ದೇವೆ ಎಂದು ವಿಕ್ರಂ ಗೌಡ ಸಹೋದರಿ ಸುಗುಣ ಹೇಳಿಕೆ ನೀಡಿದ್ದಾರೆ.