ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯಲ್ಲಿ ಶಾಲೆಗೆ ಹೋಗಲು ಇಷ್ಟವಿಲ್ಲದೆ 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿಯ ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ವಿದ್ಯಾರ್ಥಿ ಹೋಗಬೇಕಿದ್ದ.
ಇನ್ನೆರಡು ದಿನಗಳಲ್ಲಿ ಶಾಲೆ ಆರಂಭವಾಗಲಿತ್ತು. ಆದರೆ, ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಿದ್ದ ವಿದ್ಯಾರ್ಥಿ ಬುಧವಾರ ತಂದೆ ಮಲಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821
Ad